ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಕೋಫೋದ್ರಿಕ್ತವಾಗಿರುವ ಭಾರತವನ್ನ ಪಾಕ್ ಮತ್ತೆ ಕೆಣಕಿದೆ.
ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಬಾಂಬ್ ಗಳನ್ನು ಭಾರತಕ್ಕಾಗಿಯೇ ಇಡಲಾಗಿದೆ ಎಂದು ಉದ್ದಟತನದ ಮಾತನಾಡಿದ್ದು ಬಾರೀ ಆಕ್ರೋಶ ವ್ಯಕ್ತವಾಗಿದೆ.
26 ಜನರ ಸಾವಿಗೆ ಕಾರಣವಾದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಅಬ್ಬಾಸಿ ಈ ಪರಮಾಣು ಬಾಂಬ್ ಬೆದರಿಕೆ ಹಾಕಿದ್ದಾರೆ.
ಭಾರತವು ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ನಿರ್ಧರಿಸಿದರೆ, ಅದು ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು ಎಂದು ಅಬ್ಬಾಸಿ ಬಹಿರಂಗವಾಗಿ ಘೋಷಿಸಿದ್ದಾರೆ.
ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಕೇವಲ ಸಾಂಕೇತಿಕವಾಗಿಲ್ಲ ದೇಶಾದ್ಯಂತ ಇಡಲಾಗಿದೆ ಜತೆಗೆ ಬಳಸಲು ಸಿದ್ಧವಾಗಿವೆ ಎಂದು ಹೇಳಿದ್ದಾರೆ.
ಅಬ್ಬಾಸಿ ಈ ರೀತಿ ಬೆದರಿಕೆ ಹಾಕುದರೆ ಸಿಂಧೂ ನದಿ ನೀರು ಬಿಡದಿದ್ದರೆ ನಿಮ್ಮ ರಕ್ತ ಹರಿಯುತ್ತದೆ ಎಂದು ಭಾರತಕ್ಕೆ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಎಚ್ಚರಿಕೆ ನೀಡಿದ್ದಾರೆ.
ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ಕ್ಷಿಪಣಿಗಳು ಪ್ರದರ್ಶನಕ್ಕೆ ಇಟ್ಟಿಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆ ಎಂದು ಯಾರಿಗೂ ತಿಳಿದಿಲ್ಲ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳೆಲ್ಲವೂ ನಿಮ್ಮ ಮೇಲೆ ಗುರಿಯಾಗಿವೆ ಎಂದು ಎಚ್ಚರಿಕೆ ನೀಡಿದ್ದಾರೆ.
1960ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಹಲ್ಗಾಮ್ ದಾಳಿಗೆ ಭಾರತ ತೆಗೆದುಕೊಂಡ ಪ್ರತಿಕ್ರಮಗಳ ನಂತರ ಅಬ್ಬಾಸಿ ಈ ರೀತಿಯ ತೀಕ್ಷ್ಣವಾದ ಬೆದರಿಕೆಗಳನ್ನು ಒಡ್ಡಿದ್ದಾರೆ.
ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಉಂಟಾದ ಅಡಚಣೆಯನ್ನು ಉಲ್ಲೇಖಿಸಿರುವ ಅಬ್ಬಾಸಿ ಇನ್ನೂ 10 ದಿನಗಳ ಕಾಲ ಹೀಗೆ ಮುಂದುವರಿದರೆ, ಭಾರತದ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತವೆ ಎಂದು ಟೀಕಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ತನ್ನದೇ ಆದ ಭದ್ರತಾ ಲೋಪಗಳನ್ನು ಸರಿಪಡಿಸುವ ಬದಲು ಪಾಕಿಸ್ತಾನದ ಮೇಲೆ ಆರೋಪ ಹೊರಿಸುತ್ತಿದೆ ಎಂದು ಅಬ್ಬಾಸಿ ಟೀಕಿಸಿ ಇದ್ದಾರೆ.