ಬಸವಣ್ಣನವರು ಹಾಕಿಕೊಟ್ಟ ದಾರಿ­ಯಲ್ಲಿ:ಸಾಗೋಣ ಎಸ್ ಪ್ರಕಾಶ್ ಪ್ರಿಯದರ್ಶನ್

ಮೈಸೂರು: ಜಗಜ್ಯೋತಿ ಬಸವೇಶ್ವರರ ತತ್ವ, ಆದರ್ಶಗಳನ್ನು ಸಮಾಜದಲ್ಲಿ ಎಲ್ಲರೂ ಅಳವಡಿಸಿಕೊಂಡಲ್ಲಿ ಬಸವ ಜಯಂತಿ ಅರ್ಥಪೂರ್ಣವೆನಿಸುತ್ತದೆ ಎಂದು ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಹೇಳಿದರು.

ನಗರದ ಬಸವೇಶ್ವರ ರಸ್ತೆಯಲ್ಲಿರುವ ಜ್ಯೋತಿರ್ಗಮಯ ಉಚಿತ ವಿದ್ಯಾರ್ಥಿನಿಯರ ನಿಲಯದಲ್ಲಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ವಿದ್ಯಾ ನೋಟ್ ಬುಕ್,ಹಣ್ಣು ಹಂಪಲು,ವಿತರಿಸಿ,ಬಸವ ಜಯಂತಿ ಅರ್ಥಪೂರ್ಣವಾಗಿ ಆಚರಿಸಿದ ವೇಳೆ ಅವರು ಮಾತನಾಡಿದರು.

ಬಸವಣ್ಣನವರು ಹಾಕಿಕೊಟ್ಟ ದಾರಿ­ಯಲ್ಲಿ ನಾವೆಲ್ಲರೂ ಮುನ್ನಡೆಯೋಣ‌ ಎಂದು ಎಸ್ ಪ್ರಕಾಶ್ ಪ್ರಿಯದರ್ಶನ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಜ್ಯೋತಿರ್ಗಮಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳಾದ ಮಾದೇಶ್, ವೀರೇಶ್, ಗಾಯಕ ಯಶ್ವಂತ್ ಕುಮಾರ್,ಛಾಯಾ, ಬಿಜೆಪಿ ಮುಖಂಡ ಪುರುಷೋತ್ತಮ್, ವೀರಭದ್ರ ಸ್ವಾಮಿ,ರಾಜೇಶ್ ಕುಮಾರ್, ಮಹೇಶ್, ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.
.