ಮನೆಯ ಮೇಲೆ ಉರುಳಿದ‌ ವಿದ್ಯುತ್ ಕಂಬ

ಮೈಸೂರು: ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದ್ದು ಮನೆಯವರು ಅದೃಷ್ಟವಶಾತ್ ಬಚಾವಾಗಿದ್ದಾರೆ.

ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ ಬಳಿ ಇರುವ ಮನೆ ನಂ15 ರ ಮೇಲೆ ಬಿದ್ದಿದೆ.ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನ ತೆರುವುಗೊಳಿಸುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ.

ವಿದ್ಯುತ್ ತಂತಿ ಮನೆಯ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ.ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಮಾಜಿ ನಗರಪಾಲಿಕೆ ಸದಸ್ಯ ಎಸ್.ಬಿ.ಎಂ.ಮಂಜು ಭೇಟಿ ನೀಡಿ ಪರಿಶೀಲಿಸಿದರು.

ಮತ್ತೊಂದೆಡೆ ಬೃಂದಾವನ ಬಡಾವಣೆ ಎರಡನೇ ಹಂತದಲ್ಲಿ ಕಾರಿನ ಮೇಲೆ ಮರ ಉರುಳಿ ಬಿದ್ದಿದ್ದು,ಕಾರು ಜಖಂಗೊಂಡಿದೆ.