ಪಾಂಡವಪುರದಲ್ಲಿ ಶ್ರೀ ಕಾಳಿಕಾದೇವಿ ದೇವಸ್ಥಾನ ಉದ್ಘಾಟನೆ

ಪಾಂಡವಪುರ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಳಿಕಾದೇವಿ ದೇವಸ್ಥಾನದ ಉದ್ಘಾಟನೆ ನೆರವೇರಿತು.

ತಾಲೂಕು ಹಾಗು ಗ್ರಾಮದ ಜನತೆ ಮತ್ತು ಭಕ್ತರು ಸಮಾರಂಭದಲ್ಲಿ ಭಾಗವಹಿಸಿ ಧಾರ್ಮಿಕ ವಿಧಾನ ಗಳೊಂದಿಗೆ ಶ್ರೀ ಕಾಳಿಕಾ ದೇವಿಯನ್ನು ಭಕ್ತಿ ಶ್ರದ್ಧಾಪೂರ್ವಕವಾಗಿ ಪೂಜಿಸಲಾಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿ ಪ್ರಕಾಶ್ ಹಾಗೂ ದಲಿತ ಮುಖಂಡರಾದ ಕಿರಣ್ ಕುಮಾರ್ ಅವರನ್ನು ಕಾಳಿಕಾದೇವಿ ಟ್ರಸ್ಟ್ ವತಿಯಿಂದ ಅಧ್ಯಕ್ಷರಾದ ಯಶೋಧರ, ಜ್ಯೋತಿಲಿಂಗ ಮನೋರಂಜನ್ ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಟ್ರಸ್ಟ್ ಸದಸ್ಯರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮುಖಂಡರು ಭಕ್ತಾದಿಗಳು ಉಪಸ್ಥಿತರಿದ್ದರು.