ಚಂಡೀಗಢ: ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಶೇರ್ ಮಾಸಿಹ್ ಮತ್ತು ಸೂರಜ್ ಮಾಸಿಹ್ ಎಂಬವರನ್ನು ಬಂಧಿಸಿ ಅಮೃತಸರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈ ಆರೋಪಿಗಳಿಬ್ಬರೂ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ನಿರ್ದೇಶನ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ವೇಳೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.