ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಸುಯೋಗ್ ಆಸ್ಪತ್ರೆ
ಸಹಯೋಗದೊಂದಿಗೆ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ನಾಳೆ ತಾಯಂದಿರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕುಕ್ಕರಹಳ್ಳಿ ಕೆರೆಯಲ್ಲಿ ( ರೈಲ್ವೆ ಗೇಟ್) ಮುಂಭಾಗ ಮೇ11 ರಂದು ಬೆಳಿಗ್ಗೆ 8 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.
ಶಿಬಿರದ ಮುಖ್ಯ ಅತಿಥಿಗಳಾಗಿ
ಖ್ಯಾತ ವೈದ್ಯರಾದ ಡಾಕ್ಟರ್ ಎಸ್ ಪಿ ಯೋಗಣ್ಣ,ಸ್ರೀ ರೋಗ ತಜ್ಞ ರಾದ ಡಾ.ಗೀತಾ ಹಾಗೂ ಡಾ.ಅನುಷ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಸಮಾಜ ಸೇವಕಿ ಖುಷಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ