ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು

Spread the love

ಪಂಜಾಬ್: ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.

ಈ‌ ವುಷಯವನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಗೌರವ್ ಯಾದವ್(ಡಿಜಿಪಿ) ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸುತ್ತಾ, ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ಸೋರಿಕೆ ಮಾಡಿದ್ದಕ್ಕಾಗಿ ಒಬ್ಬನನ್ನು ಬಂಧಿಸಲಾಗೆದೆ,ಈತನ ಬಂಧನದಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ರಹಸ್ಯ ಮಾಹಿತಿಯನ್ನು ರವಾನಿಸಿ ಆನ್‌ಲೈನ್ ವಹಿವಾಟಿನ ಮೂಲಕ ಪಾವತಿಗಳನ್ನು ಪಡೆಯುತ್ತಿದ್ದರು ಎಂದು ಡಿಜಿಪಿ ಹೇಳಿದ್ದಾರೆ.

ಆರೋಪಿಗಳಿಬ್ಬರೂ ಹ್ಯಾಂಡ್ಲರ್ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಅವರ ಸೂಚನೆಯಂತೆ ಇತರ ಸ್ಥಳೀಯ ಕಾರ್ಯಕರ್ತರಿಗೆ ಹಣ ರವಾನಿಸುವಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ ಎರಡು ಮೊಬೈಲ್ ಫೋನ್‌‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.