ಮೈಸೂರು: ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಮೇ17 ರಂದು ಶನಿವಾರ ಸಂಜೆ 5.30 ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಪ್ರ ಸಂಘಟನಾ ಸಭೆ ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಲ್ಲಿ ನೂತನ ಸದ್ಯಸ್ವತ ಪಡೆದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು
ಮೈಸೂರು ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷರಾದ ಎಚ್ ಎನ್ ಶ್ರೀಧರ್ ಮೂರ್ತಿ ತಿಳಿಸಿದ್ದಾರೆ.
ವಿಪ್ರ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ವಿಪ್ರ ಮುಖಂಡರು ಭಾಗವಹಿಸಬೇಕೆಂದು ಎಚ್ ಎನ್ ಶ್ರೀಧರ್ ಮೂರ್ತಿ ಮನವಿ ಮಾಡಿದ್ದಾರೆ
