ಸಮಸ್ಯೆ ಪರಿಹರಿಸಲು ಜಿಟಿಡಿ ಗಮನ ಸೆಳೆದ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ

ಮೈಸೂರು: ‌ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ,ಹೂಟಗಳ್ಳಿ ಕೆ ಎಚ್‌ ಬಿ ಬಡಾವಣೆ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಬಡಾವಣೆಯಲ್ಲಿನ ಹಲವು ಸಮಸ್ಯೆಗಳ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರ ಗಮನ ಸೆಳೆದರು.

ಕೆ ಎಚ್‌ ಬಿ ಬಡಾವಣೆಯಲ್ಲಿ ಆಗಬೇಕಾದ ಕೆಲಸಗಳು ಮತ್ತು ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ಗುರುವಾರ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ರವರಿಗೆ ಮನವಿ ಪತ್ರ ಸಲ್ಲಿಸಿದರು.

ಸಮಸ್ಯೆಗಳನ್ನು ಶೀಘ್ರ‌ ಪರಿಹರಿಸಿಕೊಡಬೇಕೆಂದು ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಶಾಸಕರಲ್ಲಿ ಕೋರಿದರು.