ನವದೆಹಲಿ: ಅರಮನೆ ಮೈದಾನ ಭೂಮಿ ವಿವಾದ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.
ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಮೈಸೂರು ರಾಜಮನೆತನಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಈ ಕೂಡಲೇ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ.
ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕು ಎಂದು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ನಲ್ಲಿ 3,400 ಕೋಟಿಯ ಟಿಡಿಆರ್ ಅನ್ನು ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಅದನ್ನು ರಾಜವಂಶಸ್ಥರಿಗೆ ಹಸ್ತಾಂತರಿಸಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.
ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್‌ನಲ್ಲಿ ಟಿಡಿಆರ್ ಇಡಲಾಗಿದ್ದು,ಇದನ್ನು ರಾಜಮನೆತನ ಪರ ವಕೀಲರು ವಿರೋಧಿಸಿದ್ದರು. ರಿಜಿಸ್ಟ್ರಾರ್‌ನಲ್ಲಿ ಇರಬೇಕು ಎಂದು ಸರ್ಕಾರ ವಾದಿಸಿತ್ತು, ಅಂತಿಮವಾಗಿ ರಾಜ್ಯ ಮನೆತನಕ್ಕೆ ಟಿಡಿಆರ್ ನೀಡಲು ಆದೇಶಿಸಲಾಗಿದೆ.
ಈ ಭೂಮಿಯ ಮೇಲೆ ರಾಜಮನೆತನದ ಹಕ್ಕಿಲ್ಲ ಎನ್ನುವ ರಾಜ್ಯ ಸರ್ಕಾರದ ಅರ್ಜಿ ಇನ್ನೂ ಬಾಕಿ ಇದೆ.