ಎಸ್‌.ಟಿ.ಎಸ್,ಶಿವರಾಂ ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ

Spread the love

ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್‌.ಟಿ ಸೋಮಶೇಖರ್‌, ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಉಚ್ಚಾಟಿಸಿದೆ

ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು.ಆದರೆ ಆ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.

ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್‌ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ ಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಈ ಇಬ್ಬರು ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸಾರ್ವಜನಿಕ ಸಭೆಗಳಲ್ಲಿ ಹೊಗಳುತ್ತಿದ್ದರು. ಗ್ಯಾರಂಟಿ, ಸರ್ಕಾರದ ಯೋಜನೆಗಳಿಗೆ ಶಹಬ್ಬಾಸ್‌ಗಿರಿ ನೀಡುತ್ತಿದ್ದರು.

ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸದೇ ಡೋಂಟ್ ಕೇರ್ ಎನ್ನುತ್ತಿದ್ದರು. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ, ಸಂಘಟನಾ ಸಭೆಗಳಿಂದ ದೂರ ಉಳಿದಿದ್ದರು.ಜತೆಗೆ ಬಿಜೆಪಿಯ ಒಂದು ಗುಂಪಿನ ಬಗ್ಗೆ ನಿರಂತರ ವಾಗ್ದಾಳಿ ನಡೆಸುತ್ತಿದ್ದರು ಈ ಹಿನ್ನೆಲೆಯಲ್ಲಿ ಇಬ್ಬರೂ ಶಾಸಕರನ್ನು ಉಚ್ಛಾಟಿಸಲಾಗಿದೆ.