ಕಮಲ್ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ನಟ ಕಮಲ್ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ತಿಳಿಸಿದರು.

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್’ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ ಆದರೆ ಇದು ಕಮಲ್ ಹಾಸನ್ ಗೆ ಗೊತ್ತಿಲ್ಲ ಎಂದು ಹೇಳಿದರು.