ಮೈಸೂರು: ಕನ್ನಡ ತಮಿಳಿ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವ
ನಟ ಕಮಲಹಸನ್ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಹಿತರಕ್ಷಣ ವೇದಿಕೆ ಸದಸ್ಯರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಕಮಲ ಹಸನ್ ಭಾವಚಿತ್ರಕ್ಕೆ ಮಸಿ ಬಳಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಮಲಹಾಸನ್ ಅವರು ಈ ಕೂಡಲೇ ಕನ್ನಡ ಭಾಷೆಗೆ ಅವಮಾನ ಮಾಡಿದ್ದಕ್ಕಾಗಿ ಕ್ಷಮೆಯೋಚಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು
ಈ ವೇಳೆ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ
ಕಮಲಹಸನ್ ಅನೇಕ ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ಆದರೆ, ಅವರ ಹೇಳಿಕೆ ಕನ್ನಡಿಗರಿಗೆ ಅವಮಾನಿಸದಂತಾಗಿದೆ. ಅಲ್ಲದೇ, ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.
ಕಮಲಹಸನ್ ಅವರು ಕನ್ನಡ ತಮಿಳನಿಂದ ಬಂದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳುವಂತೆ ಮಾಡಿದ್ದಾರೆ. ನಾಡು ನುಡಿಗೆ ಹೆಸರಾದ ಕರ್ನಾಟಕ, ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ, ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ತಿಳಿಸಿದರು.
ಕೋಟ್ಯಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವಮಾನಿಸಿದ್ದಾರೆ. ಕನ್ನಡ
ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ. ಶೀಘ್ರವೇ ನಟ ಕಮಲಹಾಸನ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಬೇಕು. ಇಲ್ಲವಾದರೆ ಅವರ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಕೊಡುವುದಿಲ್ಲ ಎಂದು ವಿನಯ್ ಎಚ್ಚರಿಸಿದರು.
ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಮಂಜುನಾಥ್, ರವಿಕುಮಾರ್, ಸಂಗಮ್, ಉಮೇಶ್, ರವಿಚಂದ್ರ, ಪ್ರಶಾಂತ್, ನಿತಿನ್, ಹರೀಶ್ ಗೌಡ, ರವಿ, ಶ್ರೀನಿವಾಸ್, ಕಣ್ಣಣ್ಣ, ಶ್ರೀನಿವಾಸ್ ಶೆಟ್ಟಿ, ಕುಮಾರ್, ಬಾಬು, ಚಂದ್ರು, ಆನಂದ,ಗುರುರಾಜ್ ಶೆಟ್ಟಿ, ಪ್ರಮೋದ್ ಗೌಡ ಮತ್ತಿತರರು ಪಾಲ್ಗೊಂಡಿದ್ದರು.