ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ: ಪುರಾತನ ದೇಗುಲ ಸ್ವಚ್ಛತಾ ಕಾರ್ಯ

Spread the love

ಮೈಸೂರು: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜಯಂತಿ ಅಂಗವಾಗಿ ಪ್ರಸಿದ್ಧ ರಾಜ ಮನೆತನದ ಶ್ರೀ ನಂಜುಂಡೇಶ್ವರ ದೇವಸ್ಥಾನ ಸ್ವಚ್ಚತಾ ಕಾರ್ಯ ನಡೆಯಿತು.

ಸಂತೆಪೇಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅವರ ಅಭಿಮಾನಿಗಳು ಸಾರ್ವಜನಿಕರು ಸೇರಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಸಂಸದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ, ಕಾರ್ಯಕರ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ,ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್,ಸುದರ್ಶನ್, ಬಾಬಣ್ಣ, ಶ್ರೀನಿವಾಸ್, ಚರಣ್, ಜನಾರ್ಧನ್,ಅಶೋಕ್, ಪ್ರವೀಣ್, ಪಾಪಣ್ಣ,ವಿನೋದ್ ಮುಂತಾದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.