ಮೈಸೂರು: ಆರ್‌ಸಿಬಿ ಜಯದ ಹಿನ್ನಲೆ ಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹತ್ತಕ್ಕೂ ಹೆಚ್ಚು ಮಂದಿ ಸಾವಿಗೀ-ಡಾಗಿರುವುದು ಅತ್ಯಂತ ನೋವಿನ ವಿಚಾರ ಎಂದು ಬಿಜೆಪಿ ಮೈಸೂರು ನಗರ ಉಪಾಧ್ಯಕ್ಷೆ ಹೇಮಾನಂದೀಶ್ ತಿಳಿಸಿದ್ದಾರೆ.
ಸೂಕ್ತ ವ್ಯವಸ್ಥೆ ಮಾಡಿಕೊಂಡು ಮತ್ತೊಂದು ದಿನ ಸಂಭ್ರಮಾಚರಣೆ ಹಮ್ಮಿಕೊಳ್ಳಬಹುದಿತ್ತು. ಆದರೆ, ಪೂರ್ವ ತಯಾರಿ ಇಲ್ಲದೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಇಂತಹ ಅವಘಡ ಸಂಭವಿಸಿದೆ ಎಂದು ಅವರು ಆರೋಪಿಸಿದ್ದಾರೆ.
ವಿಜಯೋತ್ಸವದ ವೇಳೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಕಾಲ್ತುಳಿತಕ್ಕೆ ಸಿಕ್ಕಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಲೇ ಸಂಭವಿಸಿದೆ. ಈ ಘಟನೆ ಬಗ್ಗೆ ತನಿಖೆ ಆಗಬೇಕು ಎಂದು ಹೇಮಾ ನಂದೀಶ್ ಒತ್ತಾಯಿಸಿದ್ದಾರೆ.