ಮೀನುಗಾರರ ಸಹಕಾರ ಸಂಘ:ಅಧ್ಯಕ್ಷ ,ಉಪಾಧ್ಯಕ್ಷರ ಅವಿರೋಧ ಆಯ್ಕೆ

Spread the love

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ ಶ್ರೀ ಕಾವೇರಿ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಸಿದ್ದಶೆಟ್ಟಿ, ಉಪಾಧ್ಯಕ್ಷರಾಗಿ ಎಂ.ಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮದ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿದ್ದಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಕೃಷ್ಣ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರ ಹಿನ್ನಲೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗೇಶ್ ಘೋಷಿಸಿದರು.

ಚುನಾವಣೆಯಲ್ಲಿ ನಿರ್ದೇಶಕರಾದ ಅಂಗಡಿ ಸಿದ್ದಶೆಟ್ಟಿ, ಮಹದೇವಶೆಟ್ಟಿ, ಶಂಭುಲಿಂಗಶೆಟ್ಟಿ, ಸಿದ್ದರಾಜನಾಯಕ, ಸಾಕಮ್ಮ, ಬಿ.ಶಿವಮ್ಮ  ಭಾಗವಹಿಸಿದ್ದರು.

ಈ ವೇಳೆ ನೂತನ ಅಧ್ಯಕ್ಷ ಎಸ್.ಸಿದ್ದಶೆಟ್ಟಿ ಮೀನುಗಾರರ ಸಹಕಾರ ಸಂಘಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ನಮ್ಮ ಸಂಘದ ಸದಸ್ಯರುಗಳಿಗೆ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಕೊಡಿಸಿ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳಾದ ರಾಜೇಶ್, ಮಾದೇಶ್, ಸೋಮಣ್ಣ, ಶಂಕರ್,ಪಿಎಸಿಸಿಎಸ್ ನಿರ್ದೇಶಕ ಎಂ.ಕೆ.ಪುಟ್ಟಸ್ವಾಮಿ, ಮುಖಂಡರಾದ ಕೆ.ಸಿದ್ದಪ್ಪಸ್ವಾಮಿ, ಜೆ.ಮಾದೇಶ್, ಬಸವಣ್ಣ, ವಿ.ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.