ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ

ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹ ಜಯಂತಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಯಿತು.

ಮಂಗಳವಾರ ಬೆಳಗ್ಗೆ ಸೌರಮಾನ ವೃಷಭ ಶುಕ್ಲ ಚತುದರ್ಶಿ‌ ವೇಳೆ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯ ಜರುಗಿತು.

ಬೆಳಗಿನಿಂದಲೇ ಸ್ಥಳೀಯರು ಹಾಗೂ ಸುತ್ತಮುತ್ತಲ ಬಡಾವಣೆಗಳ ಜನರು ದೇವಾಲಯಕ್ಕೆ ಆಗಮುಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.

ವಿಶೇಷ ಪೂಜೆ,ಮಹಾಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಾಲಯದ ಆಢಳಿತಾಧಿಕಾರಿ ಎನ್.ಶ್ರೀನಿವಾಸನ್ ಉಪಸ್ಥಿತರಿದ್ದರು.