ಮೈಸೂರು: ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದ್ದು ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಆಗ್ರಹಿ ಸಿದ್ದಾರೆ.
ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳು ನಾಯಿಕೊಡೆಗಳಂತೆ ಹುಟ್ಟುತ್ತಲೇ ಇವೆ, ಈ ಕಂಪನಿಗಳಿಂದ ಸಾಲ ಪಡೆದ ಬಡ ಗ್ರಾಹಕರು ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿದರೂ ಸಹ ಗ್ರಾಹಕರ ಖಾತೆಗಳಿಂದ ಗೊತ್ತಿಲ್ಲದಂತೆ ಹಣ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ ಎಂದು ವಿಕ್ರಮ್ ಅಯ್ಯಂಗಾರ್ ಹೇಳಿದ್ದಾರೆ.
ಆದ್ದರಿಂದ ಕೂಡಲೇ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ಸಾಲ ಪಡೆಯದಂತೆ ಜಾಗೃತಿ ಮೂಡಿಸಬೇಕು ಎಂದು ಅವರು ಕೋರಿದ್ದಾರೆ.