ಮೈಸೂರು: ದುಃಖವನ್ನ ದೂರು ಮಾಡುವ ದೇವಿ ಚಾಮುಂಡಿಯಲ್ಲಿ ನಾನು ಪ್ರಾರ್ಥನೆ ಮಾಡಿದ್ದೇನೆ,ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ ಹಾಗಾಗಿ ಒಳಿತಾಗಲೆಂದು ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಎರಡನೆ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಕುಟುಂಬ ಸಮೇತರಾಗಿ ತಾಯಿಯ ದರ್ಶನ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ದುಖವನ್ನು ದೂರ ಮಾಡುವ ದೇವಿ ಚಾಮುಂಡಿಯಲ್ಲಿ ಪ್ರಾರ್ಥಿಸಿದ್ದೆವು,ತಾಯಿ ಒಳಿತು ಮಾಡಿದ್ದಾಳೆ,ಈ ಭಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ.
ಎಲ್ಲರಿಗೂ ಒಳ್ಳೆಯದನ್ನ ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.
ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ.
ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ,ಇಂದು ಕುಟುಂಬ ಸಮೇತ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿಕೆಶಿ ಹೇಳಿದರು.
ಪ್ರಾರ್ಥನೆಗೆ ಫಲ ಸಿಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ.ನನಗೆ ಏನು ಬೇಕು ಅದನ್ನ ಆ ತಾಯಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ,ಈಗ ಬೇರೆ ಯಾವುದೇ ಚರ್ಚೆ ಬೇಡ ಎಂದು ತಿಳಿಸಿದರು.
ಮುಖ್ಯ ಮಂತ್ರಿ ರೇಸ್ ನಿಂದ ಡಿ.ಕೆ ಶಿವಕುಮಾರ್ ಹೊರಬಿದ್ದಿದ್ದಾರ ಎಂಬ ಪ್ರಶ್ನೆಗೆ ಮೇಲಿನಂತೆ ಮಾರ್ಮಿಕವಾಗಿ ಉತ್ತರ ನೀಡಿದರು.
ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ.
ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು,ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ.
ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಷ್ಟೇ ಹೇಳಿ ಡಿ.ಕೆ.ಶಿವಕುಮಾರ್ ಹೊರಟುಬಿಟ್ಟರು.