ಬೇಡಿಕೆ ಈಡೇರಿಕೆಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರ:ಶಾಸಕ ಶ್ರೀವತ್ಸ ಬೆಂಬಲ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ಕಾಯಂ ಪೌರ ಕಾರ್ಮಿಕರು ಹಾಗೂ ಗುತ್ತಿಗೆ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದು ಶಾಸಕ ಟಿ.ಎಸ್ ಶ್ರೀವತ್ಸ ಬೆಂಬಲ ಸೂಚಿಸಿದರು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ಈ ಮುಷ್ಕರಕ್ಕೆ ಕರೆ ನೀಡಿದ್ದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಅಗ್ರಹಿಸಿ ಅನಿರ್ದಿಷ್ಟಾವದಿ ಮುಷ್ಕರ ನಡೆಸಲಾಗುತ್ತಿದೆ.

ಕೃಷ್ಣರಾಜ ವಿಧಾ‌ನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀ ವತ್ಸ ಮೈಸೂರು ನಗರ ಪಾಲಿಕೆ ಆವರಣದಲ್ಲಿ ನೌಕರರು ನಡೆಸುತ್ತಿರುವ ಮುಷ್ಕರದಲ್ಲಿ ಪಾಲ್ಗೊಂಡರು.

7ನೇ ವೇತನ ಆಯೋಗದ ಪರಿಷ್ಕೃತ ಪಾವತಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಆರ್ಥಿಕ ಇಲಾಖೆ ಬಿಡುಗಡೆ ಮಾಡಬೇಕು, ಆರೋಗ್ಯ ಸಂಜೀವಿನಿ ಕಾರ್ಯಕ್ರಮವನ್ನು ಪೌರಕಾರ್ಮಿಕರಿಗೂ ಅನುಷ್ಟಾನಗೊಳಿಸಬೇಕು, ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಬೇಕು,ನೌಕರರಿಗೆ ಮುಂಬಡ್ತಿ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರು ಅನಿರ್ದಿಷ್ಟಾವದಿ ಮುಷ್ಕರ ನಡೆಸುತ್ತಿದ್ದಾರೆ.