ಸರ್ಕಾರಿ ಯೋಜನೆಗಳ ಅನುಷ್ಠಾನ:ಡಿಸಿಗೆಪಿ ಜಿ‌ ಆರ್ ಎಸ್ ಎಸ್ ನಿಂದ ಪ್ರಸ್ತಾವನೆ

Spread the love

ಮೈಸೂರು: ಮೈಸೂರಿನ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ಭೇಟಿ ಮಾಡಲಾಯಿತು.

ಈ ವೇಳೆ ಜಿಲ್ಲಾಧಿಕಾರಿಗಳಿಗೆ ಸಂಸ್ಥೆಯ ಕಾರ್ಯಗಳನ್ನು ವಿವರಿಸಿ ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಯಿತು.

ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪಿ ಜಿ ಆರ್ ಎಸ್ ಎಸ್ ಅಧ್ಯಕ್ಷ ಯಾದವ್ ಹರೀಶ್, ಕಾರ್ಯದರ್ಶಿ ರವೀಂದ್ರ, ಸಂಘಟನಾ ಕಾರ್ಯದರ್ಶಿ ಝಾನ್ಸಿ ರಾಣಿ, ರಾಜ್ಯ ಸಂಚಾಲಕ ರಕ್ತದಾನಿ ಮಂಜು ಅವರು ಜಿಲ್ಲಾಧಿಕಾರಿ ಗಳಿಗೆ ಪ್ರಸ್ತಾವನೆ ಸಲ್ಲಿಸಿದರು.