ಪತ್ನಿಯ ಕುತ್ತಿಗೆ ತುಳಿದು ಕೊಂ*ದ ಪಾಪಿ ಪತಿ

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊಲೆಗಳು ಸಾಮಾನ್ಯವಾಗಿಬಿಟ್ಟಿದೆ

ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು‌ ಪತಿರಾಯ ಹೇಯವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪದ್ಮಜ (29) ಕೊಲೆಯಾದ ಪತ್ನಿ. ಪತಿ ಹರೀಶ್ ಕೊಲೆ ಆರೋಪಿ. ಶಾಪಿಂಗ್ ಹೋಗಿದ್ದಕ್ಕೆ ಕುತ್ತಿಗೆಯನ್ನು ಕಾಲಿನಿಂದ ತುಳಿದು ಉಸಿರು ಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ದಂಪತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಸ್ಥಳಕ್ಕೆ ಬೊಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ,ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗಂಡ,ಹೆಂಡತಿ ಬಿಇ ಮುಗಿಸಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕೆಲ ತಿಂಗಳಿನಿಂದ ಗಂಡ ಹರೀಶ್ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಪತ್ನಿಯ ಜತೆಗೆ ಸದಾ ಗಲಾಟೆ ಮಾಡುತ್ತಿದ್ದ. ನೆನ್ನೆ ಶಾಪಿಂಗ್‌ಗೆ ಹೋಗಿ ಬಂದಿದ್ದಕ್ಕೆ ಪತ್ನಿ ಜತೆಗೆ ಹರೀಶ್ ಜಗಳ ತೆಗೆದಿದ್ದಾನೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.