ಸಾತನೂರಿನಲ್ಲಿ ಕಾಂಗ್ರೆಸ್ ಮುಖಂಡನ ಹ*ತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ನಡೆದಿದೆ.

ಹೊಂಗಾಣಿದೊಡ್ಡಿ ಗ್ರಾಮದ
ನಂಜೇಶ್(45)ಹತ್ಯೆಯಾದ ಕಾಂಗ್ರೆಸ್ ಮುಖಂಡ.ಈತ ಅಚ್ಚಲು ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದರು.

ಸಾತನೂರು ಗ್ರಾಮದ ಡಾಬಾದ ವೊಂದರಲ್ಲಿ
ಪಾರ್ಟಿ ಮಾಡುತ್ತಿದ್ದ ನಂಜೇಶ್ ಮೇಲೆ ಐದಾರು ಜನರ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಭೀಕರವಾಗಿ ಹತ್ಯೆ ಮಾಡಿದೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ ನಂಜೇಶ್ ಅವರನ್ನು ಮನಬಂದಂತೆ ಕೊಚ್ಚಿದ್ದಾರೆ.

ಕೆಲವು ದಿನಗಳ ಹಿಂದೆ ತಮ್ಮ ಗ್ರಾಮದಲ್ಲಿನ ಜಮೀನಿನ ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಥಳೀಯರೊಂದಿಗೆ ಜಗಳವಾಗಿತ್ತು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನನ್ನು ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.