ಮಹಾರಾಷ್ಟ್ರ :23 ವರ್ಷದ ಯುವತಿಯನ್ನು ಅಪಹರಿಸಿ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ನಡೆದಿದೆ.
ಲೋನಾವಾಲದ ತುಂಗಾರ್ಲಿ ಪ್ರದೇಶದ ಯುವತಿಯನ್ನು ಕಾಮುಕರು ಅಪಹರಿಸಿ ತಮ್ಮ ಕಾರಿನಲ್ಲಿ ಸ್ವಲ್ಪ ದೂರ ಸಾಗಿ ಬಳಿಕ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ರಸ್ತೆಯ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.
ತುಂಗರ್ಲಿ ಪ್ರದೇಶದ ನಾರಾಯಣಿ ಧಾಮ್ ದೇವಸ್ಥಾನದ ಬಳಿ ಯುವತು ನಡೆದು ಹೋಗುತ್ತಿದ್ದಾಗ, ಮೂವರು ಆರೋಪಿಗಳು ತನ್ನನ್ನು ಬಲವಂತವಾಗಿ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ನಂತರ, ನನ್ನ ಕೈಗಳನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.
ವಿವಿಧ ಸ್ಥಳಗಳಲ್ಲಿ ಹಲವು ಬಾರಿ ಕೃತ್ಯ ಎಸಗಿದ ಬಳಿಕ ತನ್ನನ್ನು ನಂಗರ್ಗಾಂವ್‌ನ ರಸ್ತೆ ಬದಿ ಎಸೆದು ಅದೇ ಕಾರಿನಲ್ಲಿ ಹೊರಟು ಹೋದರು ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಆಕೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಕ್ಷಣವೇ ತಂಡ ರಚಿಸಿ ಆರೋಪಿಗಳ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ತುಂಗಾರ್ಲಿಯ ಸುನಿಲ್ ಗಾಯಕ್ವಾಡ್ (35) ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಂಧನಕ್ಕೆ ಬೀಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ರಾಮ್‌ಘರೆ ಮಾಧ್ಯಮದವರಿಗೆ ತಿಳಿಸಿದ್ದಾರೆ.