ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್

Spread the love

ಶ್ರೀನಗರ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.

ಆಪರೇಷನ್ ಮಹಾದೇವ್ ಅಡಿಯಲ್ಲಿ ಶ್ರೀನಗರದಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.

ದಾಳಿಯ ಮಾಸ್ಟರ್​ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿವೆ.

ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿವೆ.

ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರ ಪ್ರಾಣವನ್ನು ಕಳೆದುಕೊಂಡಿದ್ದರು.