(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ಅಂಗಡಿ ಮುಂಭಾಗ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡುತ್ತಿದ್ದ ಕಡೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ ಬಿಸಿ ಮುಟ್ಟಿಸಿದರು.
ಜತೆಗೆ ಮಾಲು ಸಮೇತ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ರಾಚಪ್ಪಾಜಿನಗರದ ಮುತ್ತುರಾಜು ಎಂಬಾತ ತನ್ನ ಚಿಲ್ಲರೆ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜನರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಪಿಎಸ್ಐ ಸುಪ್ರೀತ್ ಎಸ್.ಎ ಅವರು ದಾಳಿ ಮಾಡಿದರು.
ಸುಪ್ರೀತ್ ಅವರು ಚಿಕ್ಕಲ್ಲೂರು ಗ್ರಾಮದ ಬಳಿ ಗಸ್ತಿನಲ್ಲಿದ್ದಾಗ ಸಿಬ್ಬಂದಿಗಳೊಡನೆ ತಳಕ್ಕೆ ಹೋದಾಗ ಆರೋಪಿ ಮುತ್ತುರಾಜು ಮದ್ಯದ ಪೌಚ್ ತೆಗೆದು ಪ್ಲಾಸ್ಟಿಕ್ ಲೋಟಕ್ಕೆ ಹಾಕಿ ಸಾರ್ವಜನಿಕರಿಗೆ ಮದ್ಯ ಕುಡಿಯಲು ಕೊಡುತ್ತಿದ್ದು ಕಂಡು ಬಂದಿದೆ.
ತಕ್ಷಣ ದಾಳಿ ಮಾಡಿದಾಗ ಮದ್ಯ ಕುಡಿಯುತ್ತಿದ್ದವರು ಅಲ್ಲಿಂದ ಓಡಿ ಹೋಗಿದ್ದಾರೆ.
ನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.