ಒಂದು ದೇಶ ಒಂದು ಚುನಾವಣೆ ಸ್ವಾಗತಿಸಿ ಶಾಲಾ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ

Spread the love

ಮೈಸೂರು: ಒಂದು ದೇಶ ಒಂದು ಚುನಾವಣೆ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿ ಮತ್ತು ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಅಂಗವಾಗಿ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗದವರು
ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ವೇಳೆ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಮಾತನಾಡಿ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ ಎಂದು ಹೇಳಿದರು.

ನಗರಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಮಾತನಾಡಿ ನರೇಂದ್ರ ಮೋದಿ ದೇಶ ಕಂಡ ಅತ್ಯಂತ ಶ್ರೇಷ್ಠ ಪ್ರಧಾನಿ, ಅವರ ನಾಯಕತ್ವದಲ್ಲಿ ಭಾರತ ವಿಶ್ವದಲ್ಲೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಬಿಜೆಪಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ, ಕೋಮು ಗಲಭೆಗಳು, ನಾಗರಿಕರಿಗೆ ತೊಂದರೆ ಆಗು ವಂತಹ ಘಟನೆಗಳು, ಉಗ್ರಗಾಮಿ ಚಟುವ ಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ಹಾಗಾಗಿಯೇ ದೇಶದ ಜನತೆ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದ್ದಾರೆ ಎಂದು ನುಡಿದರು.

ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಚಕ್ರಪಾಣಿ, ಸುಚೇಂದ್ರ, ಕೃಷ್ಣೆಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಆನಂದ್, ರಾಕೇಶ್ ಮತ್ತಿತರರು ಭಾಗವಹಿಸಿದ್ದರು.