ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಾಗೂ ಹೈಕೋರ್ಟ್ ಸೂಚನೆ ನಡುವೆಯೂ ಪಟ್ಟು ಸಡಿಲಿಸದ ಸಾರಿಗೆ ನೌಕರರು, ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ ಹಾಗಾಗಿ ಬಸ್ ಗಳು ಇರುವುದಿಲ್ಲ.
ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಸ್ಪಷ್ಟಪಡಿಸಿದ್ದಾರೆ.ಹಾಗಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಯುವುದು ಶತಃಸಿದ್ದ ನಾಳೆ ಬಸ್ ಗಳು ರಸ್ತೆಗಳಿಯುವುದಿಲ್ಲ.
ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ನೌಕರರ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿ ಮನವೊಲಿಕೆ ಪ್ರಯತ್ನ ನಡೆಸಿದರು. ಆದರೆ ಅದಕ್ಕೆ ಸಂಘಟನೆಗಳು ಬೆಲೆ ಕೊಟ್ಟಿಲ್ಲ.
ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರ ಹಮ್ಮಿಕೊಂಡಿದೆ.ಆದರೆ ಉದ್ದೇಶಿಸಿರುವ ಸತ್ಯಾಗ್ರಹಕ್ಕೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ತಡೆ ನೀಡಿ ಆದೇಶಿಸಿ ವುಚಾರಣೆಯನ್ನು ನಾಳೆಗೆ ಮುಂದೂಡಿದೆ.ಆದರೂ ಮುಷ್ಕರ ನಡೆಸಲಾಗುತ್ತಿದೆ.
