ಬೆಂಗಳೂರು: ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಗೆ ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷರಾದ ಜಾನಪದ ಡಾ.ಎಸ್ ಬಾಲಾಜಿ ಆಯ್ಕೆಯಾಗಿದ್ದಾರೆ
ಜಾನಪದ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಸೇವೆಯನ್ನು ಗುರುತಿಸಿ ಬಾಲಾಜಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಕನ್ನಡ ಸಂಘ ಆ. 21 ರಂದು ಸಂಜೆ 4 ಗಂಟೆಗೆ ಬೆಂಗಳೂರು ವಿಜ್ಞಾನ ಮಂದಿರದ ಡಾ ಸತೀಶ್ ದಾವನ್ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ನಾಡ ಪ್ರಭು ಕೆಂಪೇಗೌಡರ 516 ನೇ ಜನ್ಮದಿನದ ಪ್ರಯುಕ್ತ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರು ಜಾನಪದ ಎಸ್ ಬಾಲಾಜಿ ಅವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಈ ಮಾಹಿತಿಯನ್ನು ಬಾರತೀಯ ವಿಜ್ಞಾನ ಮಂದಿರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಡಿ ವಿ ಸತೀಶ್ ಪ್ರಕಾಟಣೆಯಲ್ಲಿ ತಿಳಿಸಿದ್ದಾರೆ.