ಸಿಲಿಂಡರ್ ಸ್ಪೋಟ:ಸುಟ್ಟುಹೋದ ಬೇಕರಿ

ಬೆಳಗಾವಿ: ಸಿಲಿಂಡರ್ ಸ್ಪೋಟಗೊಂಡು ಬೇಕರಿ ಅಂಗಡಿ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದಿದೆ.

ಮುನವಳ್ಳಿ ಪಟ್ಟಣದ ಕೆಇಬಿ ಸರ್ಕಲ್ ಬಳಿ ಇರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟುಹೋಗಿವೆ.

ಹಾಸನ ಮೂಲದ ವಿರೂಪಾಕ್ಷ ಎಂಬುವವರಿಗೆ ಈ ಬೇಕರಿ ಸೇರಿತ್ತು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹಲವಾರು ವರ್ಷಗಳಿಂದ ಬೇಕರಿ ನಡೆಸುತ್ತಿದ್ದ ವಿರೂಪಾಕ್ಷ ಕೆಲಸ ಮಾಡುತ್ತಿದ್ದಾಗ ಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡಿದೆ‌.

ಕೆಲಸದಲ್ಲಿದ್ದ ಕಾರ್ಮಿಕರು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸವದತ್ತಿ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ನಡೆಸಿದರು.