ರಾಷ್ಟ್ರೀಯ ಕೈಮಗ್ಗ ದಿನಾಚರಣೆ:ಮಗ್ಗದ ಪ್ರಾತ್ಯಕ್ಷಿಕೆ, ತರಬೇತಿ ಕಾರ್ಯಾಗಾರ

Spread the love

ಮೈಸೂರು: ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಮಹಿಳಾ ಮೋರ್ಚಾ ವತಿಯಿಂದ ಮಗ್ಗ ಯಂತ್ರದ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ರಾಮಕೃಷ್ಣನಗರದ ರಾಮಕೃಷ್ಣ ಸಾಂಸ್ಕೃತಿಕ ಹಾಗೂ ಕ್ರೀಡಾ ಪ್ರತಿಷ್ಠಾನದ ಆವರಣದಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದಲ್ಲಿ ಹತ್ತಿ ನೂಲನ್ನು ಮಗ್ಗದ ಯಂತ್ರದ ಮೂಲಕ ಸುಲಭವಾಗಿ ತಯಾರಿಸುವುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲಾಯಿತು.

ಕಾರ್ಯಗಾರವನ್ನು ಉದ್ಘಾಟಿಸಿದ ಉದ್ಯಮಿ ಹಾಗೂ ಪತಕರ್ತರಾದ ಕೆ. ಮಧುಸೂದನ್ ಅವರು ಮಾತನಾಡಿ ಮನೆಯಲ್ಲಿಯೇ ಸ್ವಾವಲಂಬನೆಯಿಂದ ಮಗ್ಗದ ಕೆಲಸ ಮಾಡಬಹುದು, ತಿಂಗಳಿಗೆ 10,000 ಸಂಪಾದಿಸಬಹುದು, ಬಟ್ಟೆಗಳನ್ನು ಉತ್ಪಾದಿಸಿ ಉದ್ಯಮಗಳೊಂದಿಗೆ ಒಪ್ಪಂದ ಮಾಡಿಕೊಂಡರೆ ಹೆಚ್ಚಿನ ಅಭಿವೃದ್ಧಿಯಾಗಬಹುದು ಎಂದು ತಿಳಿಸಿದರು.

ಚಾಮುಂಡೇಶ್ವರಿ ನಗರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷರಾದ ಜಿ. ಲಕ್ಷ್ಮೀ ಮಾತನಾಡಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಮಹಿಳೆಯರ ಸ್ವಾವಲಂಬನೆಗಾಗಿ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಮಗ್ಗದ ಉದ್ಯಮದಿಂದ ಗ್ರಾಮೀಣ ಜನರು ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

ರಾಮಕೃಷ್ಣ ಸಾಂಸ್ಕೃತಿಕ ಮತ್ತು ಕ್ರೀಡಾ ಪ್ರತಿಷ್ಠಾನದ ಅಧ್ಯಕ್ಷ ಬಸವಲಿಂಗಪ್ಪ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ ರಘು, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರಾಕೇಶ್ ಭಟ್, ಪಾಲಿಕೆ ಮಾಜಿ ಸದಸ್ಯೆ ಹೇಮಾ ಗಂಗಪ್ಪ, ಪ್ರಧಾನ ಕಾರ್ಯದರ್ಶಿ ಈರೇಗೌಡ , ಉಪಾಧ್ಯಕ್ಷರಾದ ಹೆಚ್.ಜಿ ರಾಜಮಣಿ, ಶಶಿಕಾಂತ, ಹಿರಿಯಣ್ಣ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುಳಾ, ಪುಟಮ್ಮಣ್ಣಿ, ಉಪಾಧ್ಯಕ್ಷರಾದ ರಮಾಬಾಯಿ, ಹೇಮಲತಾ, ರಾಧಾ ಮುತಾಲಿಕ್, ಸುಮಿತ್ರ, ಕಾರ್ಯದರ್ಶಿಗಳಾದ ಪದ್ಮ, ಸುಮಾ, ಚಂದ್ರಿಕಾ ಅಜಯ್ ಹಿರೇಮಠ್, ವಾರ್ಡ್ ಅಧ್ಯಕ್ಷರಾದ ಬಸವಣ್ಣ, ರವಿ ಉತ್ತಪ್ಪ, ಯುವ ಮೋರ್ಚಾದ ಚಂದನ್ ಗೌಡ, ಸಾಗರ್ ಸಿಂಗ್, ಸಿ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.