ವಿಷ್ಣು ಪುಣ್ಯಭೂಮಿ ದ್ವಂಸ: ಮೈಸೂರಿನಲ್ಲಿಪೌರಕಾರ್ಮಿಕರ ಪ್ರತಿಭಟನೆ

Spread the love

ಮೈಸೂರು: ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿ ದ್ವಂಸ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟಿಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಡಾಕ್ಟರ್ ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಪೌರಕಾರ್ಮಿಕರು ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ಪೌರಕಾರ್ಮಿಕ ಮಹದೇವ್,ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ವಿಷ್ಣು ಸಮಾಧಿ ಸರಿಪಡಿಸದಿದ್ದರೆ ಸ್ವಚ್ಛತಾ ಕೆಲಸ ಬಿಟ್ಟು ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಮಾಜಿನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಮಾತನಾಡಿ,
ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ ಎಂದು ತಿಳಿಸಿದರು.

ಸರ್ಕಾರ ಕೂಡಲೇ ವಿಷ್ಣು ಅವರ ಸಮಾಧಿ ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್,
ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್,ಗೋಪಾಲ್, ಪಳನಿ, ಎಂ. ಪಿ ಮುರುಗೇಶ್,ಮಹದೇವ, ವಿಜಯ್ ಸೇರಿದಂತೆ ಅನೇಕ ಪೌರಕಾರ್ಮಿಕರು ಪಾಲ್ಗೊಂಡಿದ್ದರು.