ವಿಮಾನದ ಮೇಲೆಯೇ‌ ಮತ್ತೊಂದು ವಿಮಾನ ಪತನ

Spread the love

ಕಾಲಿಸ್ಪೆಲ್: ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ಇನ್ನೊಂದು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

ಇದರಿಂದಾಗಿ ವಿಮಾನ ನಿಲ್ದಾಣದಲ್ಲೆಲ್ಲಾ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿತು,ಅಲ್ಲಿದ್ದವರೆಲ್ಲ ಆತಂಕಕ್ಕೆ ಒಳಗಾದರು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನ ಅಲ್ಲಿನ ಕಾಲಮಾನ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಂಟಾನಾದ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.

ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ಪೈಲಟ್ ಮತ್ತು ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಇಬ್ಬರು ಗಾಯಗೊಂಡಿದ್ದು ಏರ್ಪೋರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.