ಚಾ.ನಗರದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ:ಆಕರ್ಷಕ ಪಥಸಂಚಲನ

Spread the love

(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ೭೯ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಅಬಕಾರಿ, ಗೃಹರಕ್ಷಚಕ ದಳ ತುಕಡಿಗಳು ಸೇರಿದಂತೆ ವಿವಿಧ ಶಾಲಾ ಮಕ್ಕಳ ಅಕರ್ಷಕ ಪಥಸಂಚಲನ ಎಲ್ಲರ ಮನಸೂರೆಗೊಂಡಿತು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಆಯೋಜಿಸಲಾಗಿದ್ದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು. ನಂತರ ತೆರದ ವಾಹನದಲ್ಲಿ ತೆರಳಿದ ಸಚಿವರು ಪಥಸಂಚಲನಕ್ಕೆ ಸಜ್ಜಾಗಿದ್ದ ವಿವಿಧ ತುಕಡಿಗಳಿಗೆ ಗೌರವ ವಂದನೆ ಸಲ್ಲಿಸಿದರು.

ಬಳಿಕ ಕೆ. ವೆಂಕಟೇಶ್ ಅವರು ಜನತೆಗೆ ಸ್ವಾತಂತ್ರೋತ್ಸವದ ಶುಭಾಷಯಗಳನ್ನು ತಿಳಿಸಿ, ಸ್ವಾತಂತ್ರೊತ್ಸವದ ಸಂದೇಶ ನೀಡಿದರು.

ಸ್ವಾತಂತ್ರ್ಯ ನಮಗೆ ಅಷ್ಟೇನು ಸುಲಭವಾಗಿ ದೊರೆತಿಲ್ಲ. ಅದು ಹಲವಾರು ರಾಷ್ಟ ನಾಯಕರು, ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಸಿಕ್ಕಿದೆ ಎಂದು ಸ್ಮರಿಸಿದರು.

ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದಲ್ಲಿ ಭಾವೈಕ್ಯತೆಯನ್ನು ಸಾಧಿಸುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿರುವ ವಿಪುಲ ಅವಕಾಶಗಳನ್ನು ಬಳಸಿಕೊಂಡು ದೇಶದ ಸರ್ವಾಂಗೀಣ ಪ್ರಗತಿಗೆ ನೆರವಾಗೋಣ ಎಂದು ಸಚಿವರು ಹೇಳಿದರು.

ಜಿಲ್ಲೆಯ ರಸ್ತೆ ಅಬಿವೃದ್ದಿ ಕುಡಿಯುವ ನೀರು ಕೆರೆತುಂಬಿಸುವ ಯೋಜನೆ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುವ ಯೋಜನೆಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಉತ್ಸುಕವಾಗಿದೆ ಎಂದು ಕೆ.ವೆಂಕಟೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾದಿಕಾರಿ ಶಿಲ್ಪಾ ನಾಗ್, ಎಸ್ಪಿ ಕವಿತಾ ಹಾಗೂ ಜನಪ್ರತಿನಿದಿಗಳು ಹಾಜರಿದ್ದರು‌.