ಚಾಮರಾಜನಗರ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಶ್ (21) ಮೃತಪಟ್ಟ ನತದೃಷ್ಟರು.
ಈ ನತದೃಷ್ಟ ಯುವಕರು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.