ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿ,ನಾಲ್ಕೈದು ಜನ ಮೃತಪಟ್ಟಿದ್ದಾರೆ.
ಆರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಜಮ್ಮು-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿ ಕೂಡಾ ಹಾನಿಯಾಗಿದೆ.
ಕಥುವಾ ಜಿಲ್ಲೆಯ ಘಾಟಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಹಲವಾರು ಮನೆಗಳು ಮಣ್ಣಿನಡಿ ಮುಚ್ಚಿಹೋಗಿವೆ. ಪ್ರವಾಹದ ನೀರು ಎಲ್ಲೆಡೆ ಆವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಗೂ ಹಾನಿಯಾಗಿದೆ.
ಕಥುವಾದ ಪೊಲೀಸ್ ಠಾಣೆಯೊಂದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ರೈಲ್ವೆ ಹಳಿಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲೂ ಭೂಕುಸಿತ ಸಂಭವಿಸಿದೆ. ಲಖನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಲ್ವಾನ್-ಹುಟ್ಲಿಯಲ್ಲಿಯೂ ಭೂಕುಸಿತವಾಗಿದೆ.
ಭಾರಿ ಮಳೆಯಿಂದಾಗಿ ನದಿಗಳ ಮಟ್ಟ ಹೆಚ್ಚಾಗಿದೆ. ಉಜ್ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಡಳಿತ ಜನರು ನದಿಗಳ ಬಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.
ಕಿಶ್ತ್ವಾರ್ನಲ್ಲಿ ಇನ್ನೂ ನೂರಾರು ಜನರು ಕಾಣೆಯಾಗಿದ್ದಾರೆ. ಮಚ್ಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಪ್ರವಾಹ ಸಂಭವಿಸಿದೆ. ಅನೇಕರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಈವರೆಗೆ 167 ಜನರನ್ನು ರಕ್ಷಿಸಲಾಗಿದೆ ಅವರಲ್ಲಿ 38 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.