ಬೆಳಗಾವಿ: ಚಾಲಕನ ಅಜಾಗರೂಕತೆಯಿಂದ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಘಾಟ್ ನಲ್ಲಿ ಖಾಸಗಿ ಐಷಾರಾಮಿ ಬಸ್ ಉರುಳಿ ಬಿದ್ದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಬುಧವಾರ ತಡ ರಾತ್ರಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಘಾಟಿಯಲ್ಲಿ ಉರುಳಿದೆ ಬಸ್ ನಲ್ಲಿ ಒಟ್ಟು 12 ಜನ ಪ್ರಯಾಣಿಕರಿದ್ದರು.
ಅಪಘಾತದಲ್ಲಿ ಒಬ್ಬರು ಮಹಿಳೆ ಹಾಗೂ ಪುರುಷ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂ಼ಷಣ ಬೊರಸೆ ಭೇಟಿ ನೀಡಿ ಮಾಹಿತಿ ಪಡೆದರು.
ಹಿರೇಬಾಗೇವಾಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ಸ್ಥಳೀಯರ ನೆರವಿನಲ್ಲಿ ಗಾಯಾಳುಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.