ಮೈಸೂರು: ಕೃಷ್ಣಮೂರ್ತಿ ಪುರಂನಲ್ಲಿರುವ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2024- 25
ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ ಹಮ್ಮಿಕೊಳ್ಳಲಾಯಿತು.
ಸಂಘದ ಅಧ್ಯಕ್ಷ ಎಂ ಡಿ ಗೋಪಿನಾಥ್ ಅವರ ನೇತೃತ್ವದಲ್ಲಿ ಸಂಸ್ಥೆಯ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಸದಸ್ಯರ ಮಕ್ಕಳು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ, ನೃತ್ಯ,ಸಂಗೀತ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಹಾಗೂ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್, ಎಂ ಆರ್ ಬಾಲಕೃಷ್ಣ ,ಹೆಚ್ ಪಿ
ಚೇತನ್, ಎನ್.ಪಣಿರಾಜ್ ,
ವಿಕ್ರಂ ಅಯ್ಯಂಗಾರ್,ಪಿ.ಮಹಿಮ ,
ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ , ಎಂ ಪಿ ಶಾಶ್ವತಿ ನಾಯಕ, ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸೊಸೈಟಿ ಸದಸ್ಯರ ಮತ್ತು ಸಿಬ್ಬಂದಿ ಹಾಜರಿದ್ದರು.