ಮೈಸೂರು: ಶ್ರೀನಿವಾಸ್ ಅಲಿಯಾಸ್ ಶೀನಪ ಅಲಿಯಾಸ್ ಗಾಂಜಾ ಶೀನ ಎಂಬ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಮೈಸೂರು ಪೊಲೀಸರು ಮಾದಕದ್ರವ್ಯದ ವಿರುದ್ದ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೀನ ಮೈಸೂರು ಬಿಟ್ಟು ಪರಾರಿಯಾಗಿದ್ದ, ಈತ ತನ್ನ ನಿಕಟ ವರ್ತಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಎಂದು ಹೇಳಿದ್ದಾರೆ.
ಈತನ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಕಳೆದ 45 ದಿನಗಳಿಂದ ಈತನ ಪತ್ತೆಗಾಗಿ ಒಡಿಶಾ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿಗೆ ವಿವಿಧ ಶೋಧ ತಂಡಗಳನ್ನು ಕಳುಹಿಸಲಾಗಿತ್ತು.
ಭಾನುವಾರ ಮೈಸೂರು ಬಳಿ ಗಾಂಜಾ ಶೀನನನ್ನು ಬಂಧಿಸಲಾಗಿದೆ ಮತ್ತು ಆತನಿಂದ ಸುಮಾರು 14 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾದಕ ದ್ರವ್ಯ ಪತ್ತೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಹಾಗೂ ಆರೋಪಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.