ಬೆಂಗಳೂರು: ದಸರಾ ಚಲನಚಿತ್ರೋತ್ಸವ ಉಪ ಸಮಿತಿ ವತಿಯಿಂದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಅಧಿಕೃತವಾಗಿ ಆಹ್ವಾನಿಸಲಾಯಿತು.
ಚಲನ ಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಮಾಲ್ ಆಫ್ ಮೈಸೂರಿನಲ್ಲಿ ನಡೆಯಲ್ಲಿದ್ದು ಸೆಪ್ಟೆಂಬರ್ 14 ರಿಂದ 20 ರವರೆಗೆ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನ ನಡೆಯಲಿದೆ.
ಈ ಸಂದರ್ಭದಲ್ಲಿ ಚಲನಚಿತ್ರೋತ್ಸವ ಉಪ ಸಮಿತಿಯ ಉಪವಿಶೇಷಾಧಿಕಾರಿ ವಿಜಯ್ ಕುಮಾರ್, ಕಾರ್ಯಾಧ್ಯಕ್ಷೆ ಕೆ. ಶೋಭಾ ಹಾಗೂ ಕಾರ್ಯದರ್ಶಿ ಟಿ.ಕೆ.ಹರೀಶ್ ಉಪಸ್ಥಿತರಿದ್ದರು.