ಉತ್ತರ ಪ್ರದೇಶ: ಪತಿಯ ಜತೆ ಜಗಳ ಮಾಡಿಕೊಂಡ ಮಹಿಳೆ ಮೂರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದಿದ್ದಾಳೆ.
ತೇಜ್ ಕುಮಾರಿ ಅಲಿಯಾಸ್ ಮಾಯಾ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ ತನ್ನೊಂದಿಗೆ ಮಾತನಾಡದ್ದಕ್ಕೆ ಆಕೆ ನೊಂದಿದ್ದಳು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ ಕಾರಣ ಜಗಳವಾಡಿ ನಂತರ ಇಂತಹ ಹೇಯ ಕೃತ್ಯ ಎಸಗಿದ್ದಾಳೆ.
4 ತಿಂಗಳು, 2 ವರ್ಷ ಮತ್ತು 7 ವರ್ಷ ವಯಸ್ಸಿನ ಹೆಣ್ಣುಮಕ್ಕಳನ್ನು ಮಾಯಾ ಕೊಂದಿದ್ದಾಳೆ.
ಅಕ್ಕಪಕ್ಕದ ಮನೆಯವರು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಾಗಿಲು ಒಡೆದು ನೋಡಿದಾಗ ಮೂವರು ಮಕ್ಕಳ ಶವಗಳು ಹಾಸಿಗೆಯ ಮೇಲೆ ಬಿದ್ದಿದ್ದವು. ಮಾಯಾ ಫ್ಯಾನ್ಗೆ ನೇಣು ಹಾಕಿ ಕಂಡಿರುವುದು ಗೊತ್ತಾಗಿದೆ.