ನವದೆಹಲಿ: ಹಾಸನ ಜಿಲ್ಲೆ, ಮೊಸಳೆಹೊಸಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ, ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವ ಘಟನೆ ನಿಜಕ್ಕೂ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.