ಮೈಸೂರು: ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ ಎಂದು
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಜಿಲ್ಲಾಧ್ಯಕ್ಷ ಕಡಕೋಳ ಜಗದೀಶ್
ಹೇಳಿದರು.
ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಖ್ಯಾತಸಾಹಿತಿಗಳು ಮಹಾನ್ ವಾಗ್ಮಿ ಡಾ.ಎಸ್.ಎಲ್ ಬೈರಪ್ಪನವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ವತಿಯಿಂದ ಸಂತಾಪ ಸೂಚಿಸಿದ ವೇಳೆ ಅಪರೂಪದ ಫೋಟ್ ಹಾಕಿ ಸ್ಮರಿಸಿ ಜಗದೀಶ್ ಮಾತನಾಡಿದ್ದಾರೆ.
ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು, ಭೈರಪ್ಪನವರ ಕಾದಂಬರಿಗಳು ಭಾರತದ ಬಹುತೇಕ ಭಾಷೆಗಳಿಗೆ ಅನುವಾದಗೊಂಡಿವೆ. ಭಾರತ ಅಷ್ಟೇ ಅಲ್ಲ, ವಿದೇಶಗಳಲ್ಲೂ ಅವರ ಕಾದಂಬರಿಗಳ ಕುರಿತಾದ ವಿಚಾರಗೋಷ್ಠಿಗಳು ಆಯೋಜಿಸಲ್ಪಟ್ಟಿರುವುದು ಅವರ ಕಾದಂಬರಿಗಳಿಗೆ ಇರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಜನಪರ ಕಾಳಜಿಯನ್ನೂ ಹೊಂದಿದ್ದ ಅವರು, ಹುಟ್ಟಿದ ಊರು ಸಂತೆ ಶಿವರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸಫಲರಾಗಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ 2019ರ ದಸರಾ ಉದ್ಘಾಟರಾಗಿ ಆಯ್ಕೆಯಾದ ಸಂದರ್ಭದಲ್ಲಿ ಡಾ ಎಸ್ ಎಲ್ ಭೈರಪ್ಪ ಅವರಿಗೆ ಮೈಸೂರು ಪಾಕ್ ತಿನ್ನಿಸಿದ ಸಂತೋಷದ ಕ್ಷಣವನ್ನು ಹಂಚಿಕೊಳ್ಳಲಾಯಿತು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಜಯಸಿಂಹ ಶ್ರೀಧರ್, ಚಕ್ರಪಾಣಿ, ತೇಜೇಶ್ ಲೋಕೇಶ್ ಗೌಡ, ರಾಕೇಶ್, ಶ್ರೀನಿವಾಸ್ ರಮೇಶ್ ಮತ್ತಿತರರು ಬೈರಪ್ಪ ಅವರನ್ನು ಭೇಟಿಯಾದ ಸಂದರ್ಭದ ಫೋಟೊ ಶೇರ್ ಮಾಡಿ ಮಹಾನ್ ಸಾಹಿತಿಗೆ ನಮನ ಸಲ್ಲಿಸಿದ್ದಾರೆ.
ಡಾ. ಎಸ್.ಎಲ್. ಭೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡುವ ಕುರಿತು ಘೋಷಣೆ ಮಾಡಿದ ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಮುದಾಯದ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.