ಚೆನ್ನೈ: ಚೆನ್ನೈ ಸಮೀಪದ ಎಣ್ಣೋರ್ ಉಷ್ಣ ವಿದ್ಯುತ್ ಸ್ಥಾವರ ಘಟಕದೊಳಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಹತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತ ಒಂಬತ್ತು ಮಂದಿ ಕಾರ್ಮಿಕರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಲವು ಕಾರ್ಮಿಕರು ಗಾಯಗೊಂಡಿದ್ದು ಸ್ಟಾನ್ಲೀ ಆಸ್ಪತ್ರೆಗೆ ಸಾಗಿಸಲಾಗಿದೆ.
ಎಣ್ಣಾರ್ ಥರ್ಮಲ್ ಪವರ್ ಸ್ಟೇಷನ್ ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಮೀಂಜೂರು ಬಳಿಯ ಊರನಂಪೆಡು ಗ್ರಾಮದಲ್ಲಿದೆ. ಈ ವಿದ್ಯುತ್ ಸ್ಥಾವರದ ನಾಲ್ಕನೇ ಹಂತದ ವಿಸ್ತರಣಾ ಕಾಮಗಾರಿ ಕೆಲವು ವರ್ಷಗಳಿಂದಲೂ ನಡೆಯುತ್ತಿದೆ. ಉತ್ತರ ಭಾರತ ಮೂಲದ ಬಹಳಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಇಂದು ಮಂಗಳವಾರ ಬಾಯ್ಲರ್ ವಿಭಾಗದಲ್ಲಿ ಬೃಹತ್ ಕಮಾನು ನಿರ್ಮಾಣ ಕಾರ್ಯದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ನಿರತರಾಗಿದ್ದರು. ಮುಂಗಾಗದಲ್ಲಿ ನಿರ್ಮಿಸಲಾಗಿದ್ದ ಸ್ಕಫೋಲ್ಡ್ ಕಳಚಿ ಬಿದ್ದು ಈ ಅವಘಡ ಸಂಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ಘೋಷಿಸಿದ್ದಾರೆ.
ನಿನ್ನೆಯಷ್ಟೇ ತಮಿಳುನಾಡಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು ಇಂದು ಕಟ್ಟಡ ಕುಸಿತವಾಗಿದೆ