ಮೈಸೂರು: ಗಾಂಧಿ ಜಯಂತಿ ಅಂಗವಾಗಿ
ವಾರ್ತಾ ಮತ್ತು ಪ್ರಚಾರ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ ವಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.
ಪುರಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಕೃತಿ ವಿ ಅವರು ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ವಿದ್ಯಾರ್ಥಿನಿಗೆ ಕಾಲೇಜು ಪ್ರಾಂಶುಪಾಲ ಪ್ರೊ.ಎಂ. ಅಬ್ದುಲ್ ರಹಿಮಾನ್ ಹಾಗೂ ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು, ಖಜಾಂಚಿ ಬೃಂದಾ ಎನ್ ಹಾಗೂ ಅಧ್ಯಾಪಕರು ಹಾಗೂ ಅಧ್ಯಾಪಕೇತರರು ಅಭಿನಂದನೆ ಸಲ್ಲಿಸಿದ್ದಾರೆ.