ಛಲ,ಆತ್ಮವಿಶ್ವಾಸವಿದ್ದರೆ ಯಶಸ್ವಿ ಉದ್ಯಮಿಯಾಗಲು ಸಾಧ್ಯ-ಫಾ. ಡಾ. ಜೆರಾಲ್ಡ್ ಐಸಾಕ್ ಲೋಬೊ

ಕಾರ್ಕಳ: ಯಾರಲ್ಲಿ ಕನಸು, ಛಲ, ಸ್ವಾ ಸಾಮರ್ಥ್ಯ ಆತ್ಮವಿಶ್ವಾಸ ಇರುತ್ತದೊ ಅವರು ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಧರ್ಮ ಪ್ರಾಂತದ ಧರ್ಮಾಧ್ಯಕ್ಷ ರೆ. ಫಾ. ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಸಮುದಾಯ ಭವನದಲ್ಲಿ ನಡೆದ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿಯ ವಾರ್ಷಿಕ ಸಹ ಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಸ್ಐ ಕರ್ನಾಟಕ ದಕ್ಷಿಣ ಪ್ರಾಂತ ಸಭೆಯ ಧರ್ಮ ಅಧ್ಯಕ್ಷ ರೆ. ಫಾ. ಹೇಮಚಂದ್ರ ಕುಮಾರ್ ಅವರು ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಾ. ಜೋಸೆಫ್ ಲೋಬೊ ಶಂಕರಾಪುರ ಅವರಿಗೆ ಪ್ರಗತಿ ಪರ ಕೃಷಿಕ ಪ್ರೇರಣಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸಂಘಟನೆಯ ಅಧ್ಯಕ್ಷ ಸಂತೋಷ್ ಡಿಸಿಲ್ವ ಅಧ್ಯಕ್ಷತೆ ವಹಿಸಿದ್ದರು. ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಲಿಕಾದ ಫಾ. ಆಲ್ವಿನ್ ಡಿಸೋಜ, ಸಂಘಟನೆಯ ಕಾರ್ಯದರ್ಶಿ ಆಲ್ವಿನ್ ಕ್ವಾಡ್ರಸ್, ಕೋಶಾಧಿಕಾರಿ ಮ್ಯಾಕ್ಸಿಂ ಸಲ್ಡಾನ್,ಜಿತೇಂದ್ರ ಪೋಟಾರ್ಡ್, ಆಲ್ವಿನ್ ಕ್ಯಾಟ್ರೆಸ್, ಸ್ಟೀವನ್ ಕುಲಾಸೊ ಉದ್ಯಾವರ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.