ಹೆಚ್.ಡಿ ಕೋಟೆ: ಸುಪ್ರೀಂ ಕೋರ್ಟ್ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾದಿಕಾರಿಗಳು ಹೆಚ್.ಡಿ ಕೋಟೆ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿ ಹೆಚ್.ಡಿ.ಕೋಟೆ ರಾಜ್ಯಾಧ್ಯಕ್ಷ ಬೆಟ್ಟಪ್ಪ ಮತ್ತು ಸದಸ್ಯರೊಂದಿಗೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಮತ್ತಿತರ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಅದೂ ಕೋರ್ಟ್ ಹಾಲ್ ನಲ್ಲೇ ಇಂತಹ ಹೀನ ಕೃತ್ಯಕ್ಕೆ ಮುಂದಾಗಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾ ನಿರತರು ಘೋಷಣೆ ಕೂಗಿದರು.
ಮುಖ್ಯ ನ್ಯಾಯಮೂರ್ತಿಗಳಿಗೆ ಹೆಚ್ಚಿನ ರಕ್ಷಣೆ ಕೊಡಬೇಕು,ಸಿಜೆಐ ಮೇಲೆ ಶೂ ಎಸೆಯಲು ಮುಂದಾದ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮತ್ತು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವದ ಸದಸ್ಯರು ಆಗ್ರಹಿಸಿದ್ದಾರೆ.
ಒಂದು ವೇಳೆ ಕಾನೂನು ಕ್ರಮ ಜರುಗಿಸದೆ ಹೋದಲ್ಲಿ ಮುಂದೆ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.