ಹುಣಸೂರು: ಹುಣಸೂರು ತಾಲ್ಲೂಕು ಕಸಬಾ ಹೋಬಳಿ, ಚಿಕ್ಕಹುಣಸೂರು ಗ್ರಾಮದ ವಾಚಳ್ಳಿ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತ ಕಟ್ಟಡ ತಲೆ ಎತ್ತುತ್ತಿದ್ದು ಕೂಡಲೇ ಇದನ್ನು ತಡೆ ಹಿಡಿಯಬೇಕೆಂದು
ಹುಣಸೂರು ತಹಶೀಲ್ದಾರ್ ಮಂಜುನಾಥ್
ಅವರಿಗೆ ದಲಿತ ಸಂಘರ್ಷ ಸಮಿತಿ ಹುಣಸೂರು ತಾಲೂಕು ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ರಾಮಕೃಷ್ಣ, ರಾಜ,ಶಿವರಾಜ್,
ಕೃಷ್ಣ,ಸಿದ್ದೇಶ ಎ.ಎಸ್, ಚೆಲುವರಾಜು,
ನಾರಾಯಣ ಮತ್ತಿತರರು ತಹಸೀಲ್ದಾರ್ ಮಂಜುನಾಥ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಸಮಿತಿಯ ಸದಸ್ಯರು ಮತ್ತು ಶಿಶುಪಾಲನಾ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಾಗ ಏಕಾಏಕಿ ಅಲ್ಲಿದ್ದವರು ಆಕ್ರಮಣಕ್ಕೂ ಮುಂದಾದರು ಎಂದು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿ ಅದೂ ಅಂಗನವಾಡಿ ಕೇಂದ್ರ ನಿರ್ಮಾಣವಾಗಬೇಕಾದ ಜಾಗದಲ್ಲಿ ಖಾಸಗಿ ವ್ಯಕ್ತಿಗಳಿಗೆ ಮನೆ ಕಟ್ಟಿಕೊಳ್ಳಲು ಅನುಮತಿ ಕೊಟ್ಟವರು ಯಾರು? ಕೂಡಲೇ ಅಂತವರ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ಅನದಿಕೃತ ಮನೆ ತೆರವುಗೊಳಿಸಬೇಕು ಹಾಗೂ ಅಲ್ಲಿ ಅಂಗನವಾಡಿ ಕಟ್ಟಡವನ್ನೇ ನಿರ್ಮಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದರು.
ಪದಾಧಿಕಾರಿಗಳಿಗೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಕೂಡ ಸಾತ್ ನೀಡಿದರು.