ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂಯತೀಂದ್ರ ವಿಶ್ವಾಸ

Spread the love

ಮೈಸೂರು: ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರಬೇಕು ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಿದ್ದು ಪತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ,ನವೆಂಬರ್‌ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್‌ ಆಗಲಿ, ಬೇರೆ ನಾಯಕರಾಗಲಿ ಯಾರೂ ಕೂಡ ನವೆಂಬರ್‌ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದು ತಿಳಿಸಿದರು.

ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.