ಮೈಸೂರು: ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಕೃಷ್ಣಪ್ಪ ರಂಗಮ್ಮ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನಾಳೆ
ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಕಾಮಗಾರಿ ಅಧ್ಯಕ್ಷ ಸಿ.ಜಿ ಗಂಗಾಧರ್ ಅವರು, ಅಕ್ಟೋಬರ್ 19 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ವಿಜಯನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಸಮಾರಂಭ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 95ಕ್ಕಿಂತ ಹೆಚ್ಚು ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿ ಶ್ರೀ ಸ್ಪಟಿಕ ಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಂಜಾವಧೂತ ಸ್ವಾಮೀಜಿ ಮತ್ತು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖ ಮಠ ಮೈಸೂರಿನ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಉದ್ಘಾಟಿಸುವರು.
ವಿಧಾನಪರಿಷತ್ ಮಾಜಿ ಸದಸ್ಯ ಡಾ. ಡಿ ಮಾದೇಗೌಡರು, ಸಿ ಆರ್ ಪಿ ಎಫ್ ನಿವೃತ್ತ ಡಿಐಜಿ ಕೆ.ಅರ್ಕೇಶ್, ಆರಕ್ಷಕ ಉಪ ಅಧೀಕ್ಷಕರು ಶಾಂತ ಮಲ್ಲಪ್ಪ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿಗಳಾದ ಡಾ. ಎಂ ಎಸ್ ರಾಮೇಗೌಡ, ಯು ಪಿ ಎಸ್ ಸಿ ಶ್ರೇಯಸ್, ರಿಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ವಿನೋದ್ ಭೈರಪ್ಪ ಇವರುಗಳನ್ನು ಸನ್ಮಾನಿಸಲಾಗುವುದು ಎಂದು ಗಂಗಾಧರ್ ವಿವರಿಸಿದರು.
ಶಾಸಕರುಗಳಾದ ಕೆ ಹರೀಶ್ ಗೌಡ, ಜಿ.ಟಿ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರುಗಳಾದ ಸಾ.ರಾ ಮಹೇಶ್, ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ ಗೌಡ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರುಗಳಾದ ಕೆ.ವಿ ಶ್ರೀಧರ್, ಡಾ. ಎಂ ಬಿ ಮಂಜೇಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಮೈಸೂರು ಜಿಲ್ಲಾ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಹನುಮಂತಯ್ಯ ಉಪಸ್ಥಿತರಿದ್ದರು.